Udupi

ಮಲ್ಪೆ: ಪ್ರವಾಸಿಗ ನೀರುಪಾಲು

ಮಲ್ಪೆ, ಎ.21: ಮಲ್ಪೆ ಕಡಲ ತೀರಕ್ಕೆ ಪ್ರವಾಸಕ್ಕೆ ಬಂದು ಸಮುದ್ರದಲ್ಲಿ ಈಜಲು ಹೋದ ಯುವಕನೋರ್ವ ನೀರು ಪಾಲಾಗಿದ್ದಾನೆ.

ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಮೂಲದ ಒಟ್ಟು ಐವರು ಮಲ್ಪೆ ಬೀಚ್ಗೆ ಪ್ರವಾಸಕ್ಕೆ ಬಂದಿದ್ದರು. ಇವರೆಲ್ಲ ನೀರಿನಲ್ಲಿ ಆಡುತ್ತಿದ್ದ ನಾಗೇಂದ್ರ ಅಲೆಗಳ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಕೂಡಲೇ ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಕಾರ್ಯಾಚರಣೆ ನಡೆಸಿ ನಾಗೇಂದ್ರನನ್ನು ಮೇಲಕ್ಕೆ ಎತ್ತಿದರು. ಬಳಿಕ ತಮ್ಮ ಅಂಬ್ಯುಲೆನ್ಸ್ನಲ್ಲಿ ಮಣಿಪಾಲ ಆಸ್ಪತ್ರೆಗೆ ಸಾಗಿಸಿದ್ದು, ತೀವ್ರವಾಗಿ ಅಸ್ವಸ್ಥಗೊಂಡ ಅವರು ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button