ಮಲ್ಪೆ: ಸುಮಾರು 35 ವರ್ಷ ಪ್ರಾಯದ ಅಪರಿಚಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಲ್ಪೆಮೀನುಗಾರಿಕಾ ಬಂದರಿನಲ್ಲಿ ಇಂದು ಮುಂಜಾನೆ 5.30ರ ಸುಮಾರಿಗೆ ನಡೆದಿದೆ.
ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸಕ್ಕೆ ಬಂದಿದ್ದ ಈ ಯುವಕ ಅಸ್ವಸ್ಥಗೊಂಡು ಕುಸಿದು ಬಿದ್ದ ಎನ್ನಲಾಗಿದೆ. ಸ್ಥಳೀಯರ ಕರೆಯಂತೆ ಸ್ಥಳಕ್ಕೆ ಧಾವಿಸಿದ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಪ್ರಥಮ ಚಿಕಿತ್ಸಾ ವಿಧಾನವನ್ನು ನಡೆಸಿದರು. ಇದಕ್ಕೆ ಸ್ಪಂದಿಸದ ಯುವಕನನ್ನು ಕೂಡಲೇ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಯುವಕ ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು. ಮೃತದೇಹವನ್ನು ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಈ ಯುವಕನು ಉತ್ತರ ಕನ್ನಡ ಜಿಲ್ಲೆಯವನಾಗಿರಬಹುದು ಎಂದು ತಿಳಿದು ಬಂದಿದೆ. ಈತನ ಸಂಬಂಧಿಕರು ಅಥವಾ ಗುರುತು ಪರಿಚಯವಿರುವವರು ತಕ್ಷಣ ಈಶ್ವರ್ ಮಲ್ಪೆ 9663434415 ಅಥವಾ ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬೇಕಾಗಿ ಕೋರಲಾಗಿದೆ