Udupi

ಮಣಿಪಾಲ | ಕಂದಕದಲ್ಲಿ ಬಿದ್ದಾತ ಗಂಭೀರ; ಸೂಚನೆ.

ಮಣಿಪಾಲ,ಏ.5; ಕೇಳ ಪರ್ಕಳ ತಿರುವಿನಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಅಲ್ಲಿ ನಿರ್ಮಾಣವಾಗಿರುವ ಕಂದಕದಲ್ಲಿ ಅಪರಿಚಿತ ಯುವಕನೊಬ್ಬಆಯಾತಪ್ಪಿ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ವಿಷಯ ತಿಳಿದ ಸಮಾಜಸೇವಕ ನಿತ್ಯಾನಂದ ಒಳಕಾಡುವರು ಸ್ಥಳೀಯರ ಸಹಕಾರದಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ನಡೆದಿದೆ.

 ರಕ್ಷಿಸಲ್ಪಟ್ಟ ಯುವಕ ಗಂಭೀರ ಸ್ಥಿತಿಯಲ್ಲಿದ್ದರಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಹೆಸರು, ವಿಳಾಸ ತಿಳಿದುಬಂದಿಲ್ಲ. ವಾರಸುದಾರರು ತುರ್ತಾಗಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಒಳಕಾಡುವರು ಸೂಚಿಸಿದ್ದಾರೆ.\

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button