Udupi

ಮಣಿಪಾಲ: ಗಾಂಜಾ ಸೇವನೆ – ವಿದ್ಯಾರ್ಥಿನಿ ವಿರುದ್ಧ ಪ್ರಕರಣ ದಾಖಲು.

ಮಣಿಪಾಲ: ವಿದ್ಯಾರ್ಥಿನಿಯೊಬ್ಬಳ ಮೇಲೆ ಗಾಂಜಾ ಸೇವನೆಯ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ದೂರಿನ ಪ್ರಕಾರ ಸೆಪ್ಟೆಂಬರ್ 24 ರಂದು ಮುಂಜಾನೆ 2:30 ಗಂಟೆಗೆ ಮಣಿಪಾಲ ಪೊಲೀಸ್ ಠಾಣಾ ಪೊಲೀಸ್‌ ಉಪ ನಿರೀಕ್ಷಕರು ಸಿಬ್ಬಂದಿಯವರೊಂದಿಗೆ ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಮಣಿಪಾಲದ ಎಂ ಪ್ರಿಶಾ(21) ಐ ಟಿ ಜಂಕ್ಷನ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಅನುಮಾನದ ಮೇರೆಗೆ ಸೆಪ್ಟೆಂಬರ್ 25 ರಂದು ಠಾಣೆಗೆ ಬರುವಂತೆ ತಿಳಿಸಿದ್ದು, ಅದರಂತೆ ದಿನಾಂಕ: 25 ರಂದು ಠಾಣೆ ಹಾಜರಾದವರನ್ನು ವಶಕ್ಕೆ ಪಡೆದು, ಅದೇ ದಿನ ವಿದ್ಯಾರ್ಥಿನಿ ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸಿದ್ದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಲಾಗಿತ್ತು.

 ಆರೋಪಿ ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ: 27.09.2023 ರಂದು ದೃಢಪತ್ರವನ್ನು ನೀಡಿರುತ್ತಾರೆ.

ಈ ಬಗ್ಗೆ ಮಣಿಪಾಲ ಠಾಣಾ ಅಪರಾಧ ಕ್ರಮಾಂಕ 250/2023, ಕಲಂ: 27(b) NDPS Act ರಂತೆ ಪ್ರಕರಣ ದಾಖಲಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button