ಉಡುಪಿ ನಗರಸಭೆ ವ್ಯಾಪ್ತಿಯ ಕರಂಬಳ್ಳಿ ವೆಂಕಟರಮಣ ಲೇಔಟ್ ನ ಹಲವು ಮನೆ ಜಲಾವೃತ

ಉಡುಪಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಕರಂಬಳ್ಳಿ ವೆಂಕಟರಮಣ ಲೇಔಟ್ ನ ಹಲವು ಮನೆಗಳು ಜಲಾವೃತಗೊಂಡಿರುವ ಬಗ್ಗೆ ವರದಿಯಾಗಿದೆ.

ಭಾರಿ ಮಳೆಯಿಂದ ಇಲ್ಲಿಗೆ ಸಮೀಪ ದಲ್ಲಿರುವ ತೋಡು ತುಂಬಿ ಹರಿಯುತ್ತಿದ್ದು ಇದರಿಂದ ಈ ಪರಿಸರದ ಹಲವು ಮನೆಗಳು ಜಲಾವೃತಗೊಂಡಿದೆ ಮನೆ ಎದುರಿನ ಅಂಗಳದಲ್ಲಿ ನಿಲ್ಲಿಸಲಾದ ಬೈಕ ಕಾರುಗಳು ಕೂಡ ನೀರು ಪಾಲಾಗುತ್ತಿದೆ. ಈ ಮನೆಗಳ ಮಕ್ಕಳು ಶಾಲೆಗೆ ತೆರಳಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಕೂಡ ಜಲಾವೃತ ಗೊಂಡಿರುವುದರಿಂದ ವಾಹನ ಸಂಚಾರಕ್ಕೂ ಅಡ್ಡಿಯಾಗುತ್ತಿದೆ

ಉಡುಪಿ ನಗರಸಭೆ ಅಧಿಕಾರಿಗಳು ತಕ್ಷಣ ಆಗಮಿಸಿ ಪರಿಹಾರ ಕಾರ್ಯ ನಡೆಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ

1001377513 Udupi

Latest Indian news

Popular Stories