ಉಡುಪಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹುಟ್ಟುಹಬ್ಬ ಆಚರಣೆ

ಉಡುಪಿ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಜನ್ಮದಿನದ ಪ್ರಯುಕ್ತ ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶೇಖರ್ ಪೂಜಾರಿಯವರ ನೇತೃತ್ವದಲ್ಲಿ ಕುಂದಾಪುರ ತಾಲೂಕು ಮೂಡುಬಗೆಯ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆ ಯ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡುವುದರ ಮೂಲಕ ಆಚರಿಸಲಾಯಿತು.

ಶ್ರವಣದೋಷವುಳ್ಳ ಮಕ್ಕಳಿಂದ ಸಚಿವರಿಗೆ ವಿಷ್
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಶ್ರವಣದೋಷವುಳ್ಳ ಮಕ್ಕಳು ವಿಡಿಯೋ ಕಾಲ್ ಮೂಲಕ ಜನ್ಮದಿನದ ಶುಭಕೋರಿದರು. ಇದೇ ವೇಳೆ ಮಾತನಾಡಿದ ಶೇಖರ್ ಪೂಜಾರಿ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ ಜಿಲ್ಲೆಗೆ ಉಸ್ತುವಾರಿ‌ ಸಚಿವೆಯಾದ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆ ಗಾಳಿ ಬೀಸಿದ್ದು, ಅವರ ಮಾರ್ಗದರ್ಶನದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಸದೃಢವಾಗಲಿದೆ ಎಂದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜಕೀಯ ಕ್ಷೇತ್ರದಲ್ಲಿ ಇನ್ನೂ ಉನ್ನತ ಸ್ಥಾನಕ್ಕೇರಲಿ ಎಂದು ಹಾರೈಸಿದರು.

ಇದೇ ವೇಳೆ ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಬೈಂದೂರು ಬ್ಲಾಕ್ ಅಧ್ಯಕ್ಷ ಅರವಿಂದ್ ಪೂಜಾರಿ, ಸುಬ್ರಹ್ಮಣ್ಯ ಭಟ್, ಕಿರಣ್ ಹೆಗ್ಡೆ, ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Latest Indian news

Popular Stories