ನೇಜಾರು ತಾಯಿ ಮಕ್ಕಳ ಕಗ್ಗೊಲೆ ಪ್ರಕರಣ: ಮಾ.7ರಂದು ಆರೋಪಿ ಕೋರ್ಟ್ಗೆ ಹಾಜರು

ಉಡುಪಿ, ಫೆ.28: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಚೌಗುಲೆಯನ್ನು ಮಾ.7ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೋಟೀಸ್ ಜಾರಿ ಮಾಡಿದೆ.

ದೋಷಾರೋಪ ವಾಚಿಸುವ ಪ್ರಕ್ರಿಯೆಗೆ ಪೂರ್ವಭಾವಿ ವಿಚಾರಣೆಗಾಗಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ನ್ಯಾಯಾಲಯ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಅದರಂತೆ ಆರೋಪಿಯನ್ನು ಆ ದಿನ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Latest Indian news

Popular Stories