ಬಿಜೆಪಿಯ ಯಾವ ಶಾಸಕರೂ ಕಾಂಗ್ರೆಸ್ ಸೇರುವುದಿಲ್ಲ: ಶೋಭಾ ಕರಂದ್ಲಾಜೆ

ಉಡುಪಿ: ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಪಕ್ಷಾಂತರ ಮಾಡುತ್ತಿದ್ದಾರೆ ಎಂಬ ವರದಿಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಳ್ಳಿಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಶಾಸಕರನ್ನು ಪಕ್ಷದಲ್ಲಿ ಉತ್ತಮ ರೀತಿಯಲ್ಲಿ ನಡೆಸಿಕೊಂಡಿತ್ತು. ಇದೀಗ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇಲ್ಲದಿರಬಹುದು, ಆದರೆ, ಶಾಸಕರು ಪಕ್ಷಾಂತರ ಮಾಡುವ ಸಾಧ್ಯತೆಯಿಲ್ಲ. ಬಿಜೆಪಿಯ ಎಲ್ಲ ಶಾಸಕರು ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಶ್ರಮಿಸಲಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಅನೇಕ ಶಾಸಕರು ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡರು. ಪಕ್ಷವು ಅವರನ್ನು ಚುನಾವಣೆಯಲ್ಲಿ ಗೆಲ್ಲಲು ಮಾಡಿತ್ತು. ಅಷ್ಟೇ ಅಲ್ಲದೆ, ಅವರನ್ನು ಸಚಿವರನ್ನಾಗಿಯೂ ಮಾಡಿತ್ತು. ಇದೀಗ ಅವರು ಕಾಂಗ್ರೆಸ್‌ಗೆ ಪಕ್ಷಾಂತರ ಮಾಡುವುದು ಸರಿಯೇ ಎಂಬುದನ್ನು ಚಿಂತಿಸಬೇಕೆಂದು ತಿಳಿಸಿದರು.

ಕಾವೇರಿ ವಿಚಾರ ಕುರಿತು ಮಾತನಾಡಿ, INDIA ಮೈತ್ರಿಕೂಟದ ಭಾಗವಾಗಿರುವ ಡಿಎಂಕೆ ಸಮಾಧಾನಪಡಿಸಲು ಕಾಂಗ್ರೆಸ್ ಸರಕಾರ ಕರ್ನಾಟಕದ ರೈತರಿಗೆ ವಂಚನೆ ಮಾಡುತ್ತಿದೆ. “ಈ ಬಾರಿ ರಾಜ್ಯದಲ್ಲಿ ಅಧಿಕ ಮಳೆಯಾಗಲಿಲ್ಲ… ಈ ಪರಿಸ್ಥಿತಿಯ ನಡುವೆಯೂ ಸರ್ಕಾರವು ಏಕಾಏಕಿ ತಮಿಳುನಾಡಿಗೆ ಕೃಷಿ ಉದ್ದೇಶಗಳಿಗಾಗಿ ನೀರು ಬಿಡಲು ಪ್ರಾರಂಭಿಸಿದೆ. ಸದ್ಯದ ಪರಿಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರವು ತಮಿಳುನಾಡು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕು ಮತ್ತು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ನೀರು ಬಿಡಬೇಕೇ ಹೊರತು ತಮಿಳುನಾಡಿನ ಕುರುವಾಯಿ ಕೃಷಿಗೆ ಅಲ್ಲ ಎಂದು ಆಗ್ರಹಿಸಿದರು.

Latest Indian news

Popular Stories