ಉಡುಪಿ ಅಜ್ಜರಕಾಡು 250 ಬೆಡ್ ಸಾಮರ್ಥ್ಯದ 115 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಯನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಸವರಾಜ ಬೊಮ್ಮಾಯಿ ಸರಕಾರದ ಅವಧಿಯಲ್ಲಿ ಮಂಜೂರುಗೊಂಡ ಆಸ್ಪತ್ರೆಯ ಕಾಮಗಾರಿ ನಿಗದಿಯಂತೆ 2024 ಜೂನ್ ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಟ್ಟಡ ಕಾಮಗಾರಿಯ 70 ಶೇಕಡಾ ಪೂರ್ಣಗೊಂಡ ಕೂಡಲೇ ಸಿಬ್ಬಂದಿ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲಿದ್ದು, ಶೀಘ್ರದಲ್ಲಿಯೇ ಆರೋಗ್ಯ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಡಾ. ವೀಣಾ ಕುಮಾರಿ, ಆರೋಗ್ಯ ಇಲಾಖೆಯ ಎ ಇ ಇ ಗುರುಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.