ನೀಟ್ ಪರೀಕ್ಷೆಯಲ್ಲಿ ಅವ್ಯವಹಾರವನ್ನು ಖಂಡಿಸಿ ಎನ್‌ಎಸ್‌ಯುಐ ಉಡುಪಿ ವತಿಯಿಂದ ಪ್ರತಿಭಟನೆ

ಉಡುಪಿ, ಜೂ.25: ನೀಟ್ ಪರೀಕ್ಷೆಯಲ್ಲಿ ಅವ್ಯವಹಾರವನ್ನು ಖಂಡಿಸಿ ಎನ್‌ಎಸ್‌ಯುಐ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಸಲಾಯಿತು.

ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್ ಮಾತನಾಡಿ, ನರೇಂದ್ರ ಮೋದಿ ಅವರಿಗೆ ಎಲ್ಲ ವಿಷಯ ಗೊತ್ತಿದ್ದರೂ ಈ ಬಾರಿಯ ಎನ್‌ಡಿಎ ಸರಕಾರದಲ್ಲಿ ಎರಡನೇ ಬಾರಿಗೆ ಧರ್ಮೇಂದ್ರ ಪ್ರಸಾದ್‌ರನ್ನು ಶಿಕ್ಷಣ ಸಚಿವರನ್ನಾಗಿ ನೇಮಕ ಮಾಡಿದೆ. ಈ ಮೂಲಕ ಇಡೀ ಶಿಕ್ಷಣ ವ್ಯವಸ್ಥೆಯನ್ನೇ ನಾಶ ಮಾಡಲು ಸರಕಾರ ಹೊರಟಿದೆ. ನೀಟ್ ಪರೀಕ್ಷೆಯಲ್ಲಿನ ಅವ್ಯವಹಾರ ದಿಂದ ಅವಿಭಜಿತ ದ.ಕ. ಜಿಲ್ಲೆಯ ವಿದ್ಯಾರ್ಥಿಗಳಿಗೆ ಬಹಳ ದೊಡ್ಡ ಮೋಸ ಆಗಿದೆ. ಇವರ ಕನಸುಗ ೆಲ್ಲ ನುಚ್ಚುನೂರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್ ಮಾತನಾಡಿ, ನೀಟ್ ಪರೀಕ್ಷೆಯಲ್ಲಿ ಬಹಳ ದೊಡ್ಡ ಅವ್ಯವಹಾರ ನಡೆದಿದೆ. ಇದರಿಂದ 24ಲಕ್ಷ ವಿದ್ಯಾರ್ಥಿಗಳಿಗೆ ಮೋಸ ಆಗಿದೆ. ಎಷ್ಟೋ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ಲಕ್ಷಾಂತರ ರೂ. ಸಾಲ ಮಾಡಿ ಪರೀಕ್ಷೆ ಬರೆಸಿದ್ದಾರೆ. ಆದರೆ ಕೇಂದ್ರ ಸರಕಾರ ಇವರೆಲ್ಲರಿಗೂ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮುಖಂಡರಾದ ಭಾಸ್ಕರ ರಾವ್ ಕಿದಿಯೂರು, ಶೇಖ್ ವಾಹೀದ್, ಪ್ರಖ್ಯಾತ್ ಶೆಟ್ಟಿ, ಜ್ಯೋತಿ ಹೆಬ್ಬಾರ್, ಭುಜಂಗ ಶೆಟ್ಟಿ, ಡಾ.ಸುನೀತಾ ಶೆಟ್ಟಿ, ಕುಶಲ್ ಶೆಟ್ಟಿ, ಗಣೇಶ್ ನೆರ್ಗಿ, ಯುವರಾ್ ಮೊದಲಾದವರು ಉಪಸ್ಥಿತರಿದ್ದರು

Latest Indian news

Popular Stories