ಬಿಜೆಪಿ ಮುಖಂಡರಿಂದ ಹಲ್ಲೆ ಆರೋಪದ ಮೇಲೆ ಬ್ರಹ್ಮಾವರದ ಕಾಂಗ್ರೆಸ್ ಕಾರ್ಯಕರ್ತ ಪ್ರಭಾಕರ್ ಪೂಜಾರಿ ರವರು ಚಿಕಿತ್ಸೆ ಪಡೆಯುತ್ತಿರುವ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಕಾಂಗ್ರೇಸ್ ಮುಖಂಡ ಪ್ರಸಾದ್ ಕಾಂಚನ್ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಹಲ್ಲೆ ಮಾಡಿರುವ ಆರೋಪಿಗಳ ವಿರುದ್ಧ ಶೀಘ್ರವೇ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಪ್ರಸಾದ್ ಕಾಂಚನ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದಿನಕರ ಹೇರೂರು ಅವರು ಉಪಸ್ಥಿತರಿದ್ದರು.