ಉಡುಪಿ: ಕರಾವಳಿಯಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುತ್ತಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗಾಳಿ, ಗುಡುಗು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಜು.3ರಿಂದ 5ರವರೆಗೆ ಆರೆಂಜ್ ಅಲರ್ಟ್ ಘೋಷಣೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಜು.3ರಿಂದ ಜು.7ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಜು.3 ಮತ್ತು ಜು.4ರಂದು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್ ನೀಡಲಾಗಿದೆ.ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜು.3 ರಿಂದ ಜು.5 ರವೆಗೆ ವ್ಯಾಪಕ ಮಳೆಯಾಗಲಿದ್ದು, ಯಾವುದೇ ಎಚ್ಚರಿಕೆ ಮುನ್ಸೂಚನೆ ಇರುವುದಿಲ್ಲ.
ಸೋಮವಾರ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿಉತ್ತಮ ಮಳೆಯ ಮುನ್ಸೂಚನೆ ಇದ್ದು, ಕರಾವಳಿ ಮತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ಬಿರುಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ಕರಾವಳಿಯಲ್ಲಿಹಲವು ದಿನಗಳಿಂದ ದುರ್ಬಲ ಮುಂಗಾರು ಇದ್ದು, ಜುಲೈ ಮೊದಲ ವಾರದಿಂದ ಮುಂಗಾರು ಚುರುಕುಗೊಳ್ಳುತ್ತಿದೆ. ಜು.4 ಹಾಗೂ 5ರಂದು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.