ಕರ್ನಾಟಕದ ಕರಾವಳಿ ಭಾಗಗಳಲ್ಲಿ ಆಗಸ್ಟ್ 3ರ ನಂತರ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.