ಉಡುಪಿ ಶ್ರೀಕೃಷ್ಣ ಮಠಕ್ಕೆ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ

ಉಡುಪಿ, ಮೇ 14: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಮಂಗಳವಾರ ಭೇಟಿ ನೀಡಿ ಶ್ರೀಕೃಷ್ಣ ಮತ್ತು ಮುಖ್ಯಪ್ರಾಣ ದೇವರ ದರ್ಶನ ಮಾಡಿದರು.

ಬಳಿಕ ಅವರು ಪರ್ಯಾಯ ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಕಿರಿಯ ಯತಿಗಳಿಂದ ಅನುಗ್ರಹ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಸ್ವಾಮೀಜಿಯ ಮುಖ್ಯ ಯೋಜನೆಗಳಲ್ಲೊಂದಾದ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಮಠದ ಅಭಿಮಾನಿಗಳಾದ ವಾದಿರಾಜ ಪೆಜತ್ತಾಯ, ಲಾತವ್ಯ ಆಚಾರ್ಯ, ವಿನಯ ಬನ್ನಂಜೆ ಉಪಸ್ಥಿತರಿದ್ದರು

Latest Indian news

Popular Stories