ಶಂಕರನಾರಾಯಣ: ವೆಲ್ಡಿಂಗ್ ಕೆಲಸ ಮಾಡುತ್ತಿರುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

ಉಡುಪಿ: ವೆಲ್ಡಿಂಗ್ ಕೆಲಸ ಮಾಡುತ್ತಿರುವಾಗ ಕಾಲು ಜಾತಿ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಶಂಕರ ನಾರಾಯಣ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಉತ್ತರ ಪ್ರದೇಶದ ಜಪ್ರುದ್ದಿನ್ ರವರು 6 ತಿಂಗಳಿನಿಂದ ಹೆಬ್ರಿ ತಾಲೂಕು ಬೆಳ್ವೆ ಗ್ರಾಮದ ಬೆಳ್ವೆ ರಾಧಿಕಾ ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದು, ಅ.8 ರಂದು ಬೆಳಿಗ್ಗೆ 10:00 ಗಂಟೆಗೆ ಫ್ಯಾಕ್ಟರಿಯಲ್ಲಿ ಹಳೆಯ ಶೀಟ್ ಮಾಡಿನ ವೆಲ್ಡಿಂಗ್ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ತಲೆಗೆ ಪೆಟ್ಟಾದವರನ್ನು ಚಿಕಿತ್ಸೆಯ ಬಗ್ಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದು, ಜಫ್ರುದ್ದಿನ್ ರವರು ಚಿಕಿತ್ಸೆಯಲ್ಲಿರುವಾಗ ದಿನಾಂಕ 17/10/2024 ರಂದು ಬೆಳಿಗ್ಗೆ 10:00 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 37/2024 ಕಲಂ:194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.

Latest Indian news

Popular Stories