ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ಸೂಚಿಸುವ ಅಭ್ಯರ್ಥಿಗೆ ಪ್ರಾಮಾಣಿಕ ಬೆಂಬಲ – ರಮೇಶ್ ಕಾಂಚನ್

ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷವು ಸೂಚಿಸುವ ಅಭ್ಯರ್ಥಿಯನ್ನು ಪ್ರಾಮಾಣಿಕವಾಗಿ ಬೆಂಬಲಿಸುವುದಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಸ್ಪಷ್ಟಪಡಿಸಿದ್ದಾರೆ.

ಚುನಾವಣೆ ಸಮಯದಲ್ಲಿ ಒಂದು ಪಕ್ಷದಲ್ಲಿ ಹಲವಾರು ಆಕಾಂಕ್ಷಿಗಳು ಇರುವುದು ಸಾಮಾನ್ಯವಾಗಿದ್ದು, ಕೊನೆಗೆ ಪಕ್ಷ ಸೂಕ್ತ ಅಭ್ಯರ್ಥಿಯನ್ನು ಸೂಚಿಸುತ್ತದೆ. ಪಕ್ಷ ಗೆಲ್ಲುವ ಅಭ್ಯರ್ಥಿ ಯಾರು ಎನ್ನುವುದು ಅಳೆದು ತೂಗಿ ನಿರ್ಧಾರಕ್ಕೆ ಬರಲಿದ್ದು ಆ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಿ ಪ್ರತಿಯೊಬ್ಬ ಕಾರ್ಯಕರ್ತರು ಕೂಡ ತಮ್ಮ ಶಕ್ತಿ ಮೀರಿ ಪ್ರಯತ್ನಿಸಲೇಬೇಕು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಾನೇ ಸ್ವತಃ ಅಭ್ಯರ್ಥಿ ಆಕಾಂಕ್ಷಿಯಾಗಿದ್ದರೂ ಕೂಡ ಬಳಿಕ ಬದಲಾದ ರಾಜಕೀಯ ಸನ್ನೀವೇಶದಲ್ಲಿ ಪಕ್ಷ ಸೂಚಿಸಿದ ಅಭ್ಯರ್ಥಿಯ ಗೆಲುವಿಗಾಗಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗಿದೆ.

ಹಾಗೆಯೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಪಕ್ಷ ಯಾವುದೇ ವ್ಯಕ್ತಿಯನ್ನು ಅಭ್ಯರ್ಥಿಯನ್ನಾಗಿಸಿದರೂ ಕೂಡ ಅವರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸಲಾಗುವುದು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories