
ನೇಜಾರು ಕೊಲೆ ಪ್ರಕರಣ | ಆರೋಪಿಯ ಶೀಘ್ರ ಪತ್ತೆ ಮಾಡಿ, ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಿ – ಸಾಲಿಡಾರಿಟಿ ಉಡುಪಿ ಆಗ್ರಹ
ಉಡುಪಿ: ನೇಜಾರಿನ ತೃಪ್ತಿ ಲೇ ಔಟ್ ನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದು, ಹಾಡ ಹಗಲೇ ಈ ಕೃತ್ಯ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಪೊಲೀಸ್ ಇಲಾಖೆ ಈ ಕೃತ್ಯ ಎಸಗಿದ ದುಷ್ಕರ್ಮಿಯನ್ನು ಶೀಘ್ರ ಬಂಧಿಸಿ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಉಡುಪಿ ಜಿಲ್ಲೆ ಆಗ್ರಹಿಸುತ್ತದೆ.
ಅದರೊಂದಿಗೆ ಉಡುಪಿ ಜಿಲ್ಲೆಯ ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡದೆ ಆರೋಪಿಯ ಪತ್ತೆಗೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ವಿನಂತಿಸುತ್ತೇವೆ.
ಇಂತಹ ಪ್ರಕರಣಗಳು ಜನರಲ್ಲಿ ಸಹಜವಾಗಿ ಆತಂಕ ಸೃಷ್ಟಿ ಮಾಡುತ್ತದೆ. ಆದ್ದರಿಂದ ಆದಷ್ಟು ಶೀಘ್ರ ಆರೋಪಿಗಳನ್ನು ಪೊಲೀಸ್ ಇಲಾಖೆ ಸೆರೆ ಹಿಡಿದು ಸೂಕ್ತ ಕಾನೂನು ಕ್ರಮ ಕೈಗೊಂಡು ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು.ಇಂಥ ಘಟನೆ ಇನ್ನು ನಮ್ಮ ಜಿಲ್ಲೆಯಲ್ಲಿ ಹಾಗೂ ರಾಜ್ಯದಲ್ಲಿ ಮತ್ತೆ ಮಾರುಕಳಿಸ ಬಾರದು ಈ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಸಾಲಿಡಾರಿಟಿ ಉಡುಪಿ ಜಿಲ್ಲಾಧ್ಯಕ್ಷರಾದ ನಬೀಲ್ ಗುಜ್ಜರ್ ಬೆಟ್ಟು ಆಗ್ರಹಿಸಿದ್ದಾರೆ.




