ನೈರುತ್ಯ ಪದವೀಧರರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆ: ರಘುಪತಿ ಭಟ್ ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ -2024 ಇದರ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀ ಕೆ. ರಘುಪತಿ ಭಟ್ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಮ್ಮ ಟಿವಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಶಿವಚರಣ್ ಶೆಟ್ಟಿ, ಬಿಜೆಪಿಯ ಹಿರಿಯ ಕಾರ್ಯಕರ್ತರಾದ ವಿಶ್ವನಾಥ್ ಭಟ್, ಕೊಡಗು ಜಿಲ್ಲೆಯ ಮುಖಂಡರಾದ ಚೇತನ್ ಮಂದಣ್ಣ, ಶಿವಮೊಗ್ಗದ ಎಂ. ಶಂಕರ್ ಉಪಸ್ಥಿತರಿದ್ದರು. ರಘುಪತಿ ಭಟ್ ಅವರು ನೂರಾರು ಮಂದಿ ಹಿತೈಷಿಗಳೊಂದಿಗೆ ತೆರಳಿ ನಾಮ ಪತ್ರ ಸಲ್ಲಿಸಿದರು.

Latest Indian news

Popular Stories