ನೇಜಾರು ಕೊಲೆ ಪ್ರಕರಣ: ಮಹಜರು ಸಂದರ್ಭದಲ್ಲಿ ನಡೆದ ಘಟನೆಗೆ ಪೊಲೀಸರಿಂದ ದಾಖಲಾಗಿದ್ದ ಎಫ್.ಐ.ಆರ್’ಗೆ ಮಧ್ಯಂತರ ತಡೆಯಾಜ್ಞೆ

ಉಡುಪಿ: ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನೇಜಾರಿನಲ್ಲಿ ಮಹಜರು ಪ್ರಕ್ರಿಯೆ ನಡೆಸುವ ವೇಳೆ ನಡೆದ ಘಟನೆಗೆ ಸಂಬಂಧಿಸಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಇದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಉಚ್ಚ ನ್ಯಾಯಾಲಯ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ವಿಧಿಸಿ ಆದೇಶಿಸಿದೆ.

ಎಪಿಸಿಆರ್ ನ ಪ್ರಧಾನ ಕಾರ್ಯದರ್ಶಿ ಅಡ್ವಕೇಟ್ ನಿಯಾಝ್ ಈ ಪ್ರಕರಣದ ಕುರಿತು ಉಚ್ಚ ನ್ಯಾಯಾಲಯದಲ್ಲಿ ವಾದಿಸಿದ್ದರು.

Thg ಯೊಂದಿಗೆ ಮಾತನಾಡಿದ ಅಡ್ವಕೇಟ್ ನಿಯಾಝ್ ಈ ಪ್ರಕರಣದಲ್ಲಿ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ ಎಂದು‌ ತಿಳಿಸಿದ್ದಾರೆ.

ಅಕ್ರಮ ಕೂಟ ಸೇರಿ ಗಲಭೆಗೆ ಯತ್ನಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಐಪಿಸಿ 143, 147, 341, 186, 149 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ನಂತರ ಕೆಲವರನ್ನು ಈ ಪ್ರಕರಣದಲ್ಲಿ ವಿಚಾರಣೆಗೂ ಒಳಪಡಿಸಲಾಗಿತ್ತು.

Latest Indian news

Popular Stories