ಉಡುಪಿ: ಡಿಪ್ಲೋಮಾ ವಿದ್ಯಾರ್ಥಿನಿ ಮೃತ್ಯು, ವೈದ್ಯರ ನಿರ್ಲಕ್ಷ್ಯ ಆರೋಪ – ಪ್ರತಿಭಟನೆ

ಉಡುಪಿ: ಖಾಸಗಿ ಆಸ್ಪತ್ರೆಯೊಂದರಲ್ಲಿ ಅನಾರೋಗ್ಯದ ಚಿಕಿತ್ಸೆಗಾಗಿ ದಾಖಲಾಗಿದ್ದ ಡಿಪ್ಲೋಮಾ‌ ವಿದ್ಯಾರ್ಥಿನಿ ನಿಖಿತ (20) ಮೃತಪಟ್ಟಿದ್ದು ಇದೀಗ ಆಕೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು‌ ಆರೋಪಿಸಲಾಗಿದೆ.

Screenshot 2023 0623 131819 Udupi

ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣದ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆ ವತಿಯಿಂದ ನಗರದ ಸಿಟಿ ಆಸ್ಪತ್ರೆಯ ಎದುರು ಇಂದು ಪ್ರತಿಭಟನೆ ನಡೆಸಲಾಯಿತು.

ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳು ಸಿಟಿ ಆಸ್ಪತ್ರೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ವಿದ್ಯಾರ್ಥಿಗಳನ್ನು ರಸ್ತೆಯಲ್ಲೇ ತಡೆದು ನಿಲ್ಲಿಸಿದರು. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು.


ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲಿನ‌ ನಿಕಿತಾ, ಕಳೆದ ಭಾನುವಾರ ಬೆಳಿಗ್ಗೆ ನಗರದ ಸಿಟಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ವೈದ್ಯರ ನಿರ್ಲಕ್ಷ್ಯದಿಂದ ನಿಕಿತಾ ಸಾವಿಗೀಡಾದ್ದಾಳೆ ಎಂದು ಮನೆಯವರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Screenshot 2023 0623 143322 Udupi

ಆಸ್ಪತ್ರೆ ಸ್ಪಷ್ಟನೆ:

ಆಸ್ಪತ್ರೆ ಈ ಕುರಿತು ಸ್ಪಷ್ಟನೆ ನೀಡಿದ್ದು ವೈದ್ಯರ ನಿರ್ಲಕ್ಷ್ಯ ಆರೋಪವನ್ನು ಅಲ್ಲಗಳೆದಿದೆ.ವಿದ್ಯಾರ್ಥಿನಿ ಹೊಟ್ಟೆನೋವು, ವಾಂತಿ ಮತ್ತು ಬೇಧಿ ಸರಿಯಾಗಿ ಆಗದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ನಮ್ಮ ಆಸ್ಪತ್ರೆಯ ವೈದ್ಯರು ಎಲ್ಲ ಜವಾಬ್ದಾರಿಯೊಂದಿಗೆ ಚಿಕಿತ್ಸೆ ನೀಡಿದ್ದಾರೆ. ಇದೀಗ ಅವರು ಮೃತರಾಗಿದ್ದು ಏಕಾಏಕಿ ಮೃತಪಟ್ಟದ್ದಕ್ಕೆ ಸೂಕ್ತ ಕಾರಣ ಕಂಡು ಬಂದಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿದರೆ ಕಾರಣ ಸಿಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

IMG 20230623 WA0009 Udupi
IMG 20230623 WA0010 Udupi

ಕುಟುಂಬಸ್ಥರು ವೈದ್ಯ ರ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಹೇಳಿದ್ದು ತನಿಖೆಗೆ ಆಗ್ರಹಿಸಿದ್ದಾರೆ.

Latest Indian news

Popular Stories