ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ಬೈಲೂರು ಶಾಖೆಯ ವ್ಯವಸ್ಥಾಪಕ ಅಲೆವೂರು ನಿವಾಸಿ ಮಂಜೇಶ್ ಕುಮಾರ್(49) ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿ ಯಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಕೆಲವು ದಿನಗಳ ಹಿಂದೆ ಗುಣಮುಖರಾಗಿ ಸಂಘದ ವ್ಯವಸ್ಥಾಪಕರಾಗಿ ಪದೋನ್ನತಿ ಪಡೆದಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಇವರು ರವಿವಾರ ಮನೆಯಲ್ಲಿ ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿದ್ದಾರೆ