ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಇಂದು ಜಿಲ್ಲೆಯಲ್ಲಿ ಒಟ್ಟು 3 ನಾಮಪತ್ರಗಳು ಸಲ್ಲಿಕೆಯಾಗಿದೆ.
118 ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಪ್ರಸಾದ್ ನಾಮಪತ್ರ ಸಲ್ಲಿಸಿರುತ್ತಾರೆ.
120 ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ನಿತಿನ್ ವಿ. ನಾಮಪತ್ರ ಸಲ್ಲಿಸಿದ್ದಾರೆ.
122 ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ್ ದೀಪಕ್ ಮೆಂಡೋನ್ಸಾ ನಾಮಪತ್ರ ಸಲ್ಲಿಸಿದ್ದಾರೆ.
ಕಾಪು ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಇಂದು ಯಾವುದೇ ನಾಮಪತ್ರಗಳು ಸಲ್ಲಿಕೆಯಾಗಿರುವುದಿಲ್ಲ.
ಜಿಲ್ಲೆಯಲ್ಲಿ ಇದುವರೆಗೆ ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ 1, ಕುಂದಾಪುರ ವಿಧಾನ ಸಭಾ ಕ್ಷೇತ್ರಕ್ಕೆ 2 , ಉಡುಪಿ ವಿಧಾನ ಸಭಾ ಕ್ಷೇತ್ರಕ್ಕೆ 2, ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ 2 ಸೇರಿದಂತೆ ಒಟ್ಟು 7 ನಾಮಪತ್ರಗಳು ಸಲ್ಲಿಕೆಯಾಗಿವೆ.
ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದೆ.