ನಾಳೆ ಉಡುಪಿಗೆ ಬಿ ಎಲ್ ಸಂತೋಷ್ ಆಗಮನ

ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ನಾಳೆ ಮೇ 30, ಗುರುವಾರ ಬೆಳಿಗ್ಗೆ ಘಂಟೆ 11.30ಕ್ಕೆ ಉಡುಪಿಯ ಹೋಟೆಲ್ ಕಿದಿಯೂರು ಇದರ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಈ ಸಮಾವೇಶದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರು, ಪಕ್ಷದ ರಾಜ್ಯ ನಾಯಕರು, ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆ.

ಉಡುಪಿ ಜಿಲ್ಲೆಯಾದ್ಯoತ ಮಂಡಲವಾರು ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಪ್ರತಿ 25 ಮತದಾರರ ಜವಾಬ್ದಾರಿಯನ್ನು ಹೊಂದಿರುವ ಘಟ ನಾಯಕರು ಹಾಗೂ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠಗಳ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories