
ತೋನ್ಸೆ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಕುಸುಮ ರವೀಂದ್ರ, ಉಪಾಧ್ಯಕ್ಷರಾಗಿ ಅರುಣ್ ಫರ್ನಾಂಡೀಸ್ ಆಯ್ಕೆ
ಕೆಮ್ಮಣ್ಣು : ಉಡುಪಿ ತಾಲೂಕಿನ ತೋನ್ಸೆ ಗ್ರಾ ಪಂ ಕೆಮ್ಮಣ್ಣು ಇದರ ಎರಡನೇ ಅವಧಿಯ ಅಧ್ಯಕ್ಷರಾಗಿ ಶ್ರೀಮತಿ ಕುಸುಮ ಮತ್ತು ಉಪಾಧ್ಯಕ್ಷರಾಗಿ ಶ್ರೀ ಅರುಣ್ ಫೆರ್ನಾಂಡೀಸ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಯ್ಕೆಯಾಗಿರುವ ಇಬ್ಬರೂ ಕಾಂಗ್ರೆಸ್ ಬೆಂಬಲಿಗರಾಗಿದ್ದು, ಮೀಸಲಾತಿಯಂತೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಯ ಮಹಿಳೆಗೆ ಮತ್ತು ಉಪಾಧ್ಯಕ್ಚ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.
ಆಯ್ಕೆ ಪ್ರಕ್ರಿಯೆಗೆ ಜಿಲ್ಲಾಧಿಕಾರಿಯವರು ಶ್ರೀ ಶಂಕರ್, ಜಿಲ್ಲಾ ವ್ಯವಸ್ಥಾಪಕರು, ಅಂಬೇಡ್ಕರ್ ಅಭಿವೃದ್ಧಿ ನಿಗಮ ಅವರನ್ನು ಗೊತ್ತು ಪಡಿಸಿದ ಅಧಿಕಾರಿಯನ್ನಾಗಿ ನೇಮಿಸಿದ್ದು ಅದರಂತೆ ಅವರು ಇಂದು ಆಯ್ಕೆ ಪ್ರಕ್ರಿಯೆಯನ್ನು ನಡೆಸಿದರು.
21 ಜನ ಸದಸ್ಯರನ್ನು ಹೊಂದಿರುವ ಗ್ರಾ ಪಂ ನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಒಂದೊಂದೇ ನಾಮ ಪತ್ರ ಸಲ್ಲಿಕೆಯಾಗಿತ್ತು. ಅದನ್ನು ಪರಿಶೀಲಿಸಿದ ಆಧಿಕಾರಿಯವರು ಚುನಾಯಿತ ಪ್ರತಿನಿಧಿಗಳ ಸಭೆ ನಡೆಸಿ ಅವಿರೋಧ ಆಯ್ಕೆಯಾಗಿರುವುದಾಗಿ ಘೋಷಿಸಿದರು.
ಉಪಾಧ್ಯಕ್ಷರಾಗಿ ಆಯ್ಕೆಯಾದ ಅರುಣ್ ಫೆರ್ನಾಂಡೀಸ್ ಅವರು ಈ ಹಿಂದಿನ ಅವಧಿಯಲ್ಲೂ ಉಪಾಧ್ಯಕ್ಷ ರಾಗಿ ಕಾರ್ಯನಿರ್ವಹಿಸಿದ್ದರು.
ಹಿಂದಿನ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಶ್ರೀ ನಿತ್ಯಾನಂದ ಕೆಮ್ಮಣ್ಣು ಅವರು ಆಯ್ಕೆಯಾದ ಕೆಲವೇ ತಿಂಗಳಲ್ಲಿ ನಿಧನರಾದ ಹಿನ್ನಲೆಯಲ್ಲಿ ಉಪ ಚುನಾವಣೆ ನಡೆದು ಅವರು ಆಯ್ಕೆಯಾಗಿದ್ದರು.




