ಉಡುಪಿ, ಆ.3: ಅಪಾಯಕಾರಿ ರೀತಿಯಲ್ಲಿ ಸ್ಟಂಟ್ ಮಾಡಿ ರಸ್ತೆಯಲ್ಲಿ ಸಂಚರಿಸುವವರಿಗೆ ಅಪಾಯ ತಂದೊಡ್ಡಿದ ಯುವಕನೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಯುವಕರು ಅಪಾಯಕಾರಿ ವೇಗದಲ್ಲಿ ಸ್ಕೂಟರ್‌ಗಳನ್ನು ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಯುವಕರು ಅಪಾಯಕಾರಿಯಾಗಿ ದ್ವಿಚಕ್ರ ವಾಹನ ಚಲಾಯಿಸುತ್ತಿರುವ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದರು.
ಕ್ಷಿಪ್ರ ಕ್ರಮ ಕೈಗೊಂಡಿರುವ ಮಣಿಪಾಲ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಪರ್ಕಳ ನಿವಾಸಿ ಆಶಿಕ್ (19) ಎಂಬಾತನನ್ನು ಗುರುತಿಸಿ ಬಂಧಿಸಿದ್ದಾರೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲದ ಡಿಸಿ ಕಚೇರಿಗೆ ತೆರಳುವ ರಸ್ತೆಯಲ್ಲಿ ಯುವಕರು ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುತ್ತಿರುವ ದೃಶ್ಯ ಸೆರೆಯಾಗಿದೆ. ವಾಹನಗಳು ಉಡುಪಿ ನೋಂದಣಿಯಾದಗಿತ್ತು.