ಉಡುಪಿ: ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಮುಖ್ಯಮಂತ್ರಿಗಳ ಸೇವಾ ಪದಕ

ಉಡುಪಿ: ಜಿಲ್ಲಾ ಅಗ್ನಿಶಾಮಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವಿನಾಯಕ ಉ ಕಲ್ಗುಟಕರ, ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿಶಾಮಕರಾದ ಅಶೋಕ್ ಕುಮಾರ್, ಕೃಷ್ಣ ನಾಯ್ಕ್ ಹಾಗೂ ಅಗ್ನಿಶಾಮಕ ಚಾಲಕ ಸುಧೀರ್ ಉಡುಪಿ, ಕುಂದಾಪುರ ಅಗ್ನಿಶಾಮಕ ಠಾಣಾಧಿಕಾರಿ ಸುಂದರ್ ವಿ ಮತ್ತು ಕಾರ್ಕಳ ಅಗ್ನಿಶಾಮಕ ಠಾಣೆಯ ಪ್ರಮುಖ ಅಗ್ನಿಶಾಮಕ ಅಚ್ಚುತ್ತ ಕರ್ಕೇರಾ ಇವರುಗಳಿಗೆ ಅಗ್ನಿಶಾಮಕ ಇಲಾಖೆಯಲ್ಲಿ ಉತ್ತಮ ಸೇವೆಗಾಗಿ ಮುಖ್ಯಮಂತ್ರಿಗಳ ಸೇವಾ ಪದಕ ಲಭಿಸಿರುತ್ತದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories