Udupi

ಉಡುಪಿ: ಪಕ್ಷ ವಿರೋಧಿ ಚಟುವಟಿಕೆ – ಮೂವರು ಬಿಜೆಪಿ ಸದಸ್ಯರ ಉಚ್ಚಾಟನೆ

ಉಡುಪಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ನ ಬಿಜೆಪಿ ಬೆಂಬಲಿತ ಮೂವರನ್ನು ಸದಸ್ಯರ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ.

ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದುಕೊಂಡು ಪಕ್ಷದ ನಿಲುವನ್ನು ವಿರೋಧಿಸಿ ಬಿಜೆಪಿಯ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅವರ ಸೋಲಿಗೆ ಕಾರಣರಾದ ಮಾಲತಿ ಮತ್ತು ಅವರಿಗೆ ಬೆಂಬಲಿಸಿರುವ ಗ್ರಾಪಂ ಸದಸ್ಯರಾದ ಗಿರೀಶ್ ಸುವರ್ಣ ಹಾಗೂ ಫ್ರೀಡಾ ಡಿಸೋಜ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಾಗಿ ಕಾಪು ಮಂಡಲ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸೂಚನೆಯಂತೆ 6 ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್‌ಎಸ್. ಕಲ್ಮಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button