
Udupi
ಉಡುಪಿ | ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹುಲಿ ಉಗುರು ಪೆಂಡೆಂಟ್ ಅಧಿಕಾರಿಗಳಿಗೆ ಹಸ್ತಾಂತರ
ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು, ಹುಲಿ ಉಗುರು ಹೋಲುವ ಪೆಂಡೆಂಟ್ ಧರಿಸಿರುವ ಫೋಟೋಗಳು ಮಾಧ್ಯಮಗಳಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮೃಣಾಲ್ ಹೆಬ್ಬಾಳಕರ್ ಅವರ ಮನೆಗೆ ಆಗಮಿಸಿದ್ದರು.
ಈ ವೇಳೆ ಆ ಪೆಂಡೆಂಟ್ ನ್ನು ಮೃಣಾಲ್ ಅವರು ಅಧಿಕಾರಿಗಳಿಗೆ ಹಸ್ತಾಂತರಿಸಿದ್ದು, ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.



