ಉಡುಪಿ ಧರ್ಮಪ್ರಾಂತ್ಯದಲ್ಲಿ ‘ಕ್ರಿಸ್ತ ಜಯಂತಿ ಜುಬಿಲಿ 2025’ರ ಸಿದ್ಧತೆಗೆ ವಿಧ್ಯುಕ್ತ ಚಾಲನೆ

ಉಡುಪಿ: ಜಗತ್ತಿನಾದ್ಯಂತ ಕ್ರೈಸ್ತ ಧರ್ಮಸಭೆಯಲ್ಲಿ ಯೇಸು ಕ್ರಿಸ್ತರ ಜನನದ 2025 ವರ್ಷಗಳ ಸ್ಮರಣಾರ್ಥವಾಗಿ ಕ್ರಿಸ್ತ ಜಯಂತಿ ಜುಬಿಲಿ 2025 ಸಂಭ್ರಮಾಚರಣೆಯ ಪೂರ್ವ ಸಿದ್ದತೆಗಳಿಗೆ ಚಾಲನೆ ನಡೆಯುತ್ತಿದ್ದು ಉಡುಪಿ ಕಥೊಲಿಕ ಧರ್ಮಕ್ಷೇತ್ರದಲ್ಲಿಯೂ ಎರಡು ವರ್ಷಗಳ ಪೂರ್ವ ತಯಾರಿಗಳಿಗಾಗಿ ಭಾನುವಾರ ಧರ್ಮಾ‍ಧ್ಯಕ್ಷರಾದ ಅತಿ ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ ಭರವಸೆಯ ಯಾತ್ರಿಕರು ಎಂಬ ಧ್ಯೇಯ ವಾಕ್ಯವನ್ನು ಒಳಗೊಂಡ ಲಾಂಛನ ಅನಾವರಣದೊಂದಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು ಜಗದ್ಗುರು ಪೋಪ್ ಫ್ರಾನ್ಸಿಸ್‌ ರವರು ಕಲಿಕಾ ವರ್ಷದಲ್ಲಿ ಎರಡನೇ ವ್ಯಾಟಿಕನ್‌ ಕೌನ್ಸಿಲ್‌ನ ನಾಲ್ಕು ಸಂವಿಧಾನಗಳ ಅಧ್ಯಯನವನ್ನು ನಡೆಸಲುನಿರ್ದೇಶಿಸಿದ್ದಾರೆ. ಈ ಸಂವಿಧಾನಗಳ ಆಧ್ಯಯನದಿಂದ ನಮ್ಮ ವಿಶ್ವಾಸವನ್ನು ಆಳವಾಗಿ ಆರಿಯಲು ಮತ್ತು ಪ್ರಾರ್ಥನಾ ಸ್ಪೂರ್ತಿಯಿಂದ ಈ ಜಯಂತಿಯನ್ನು ಆಚರಿಸಲು ನಮಗೆ ಕರೆನೀಡಿದ್ದಾರೆ. ಈ ನಿಟ್ಟಿನಲ್ಲಿ ಧರ್ಮಪ್ರಾಂತ್ಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಧರ್ಮಾಧ್ಯಕ್ಷರು ಜಯಂತ್ಯುತ್ಸವಕ್ಕೆ ಸಮರ್ಪಿತವಾದ ಪ್ರಾರ್ಥನೆಯನ್ನು, ಯಾಜಕರೊಂದಿಗೆ ಮತ್ತು ನೆರೆದ ವಿಶ್ವಾಸಿಗಳೊದಿಗೆ ಪಠಿಸಿದರು.

ಉಡುಪಿ ಧರ್ಮಪ್ರಾಂತ್ಯದಾದ್ಯAತ ಎಲ್ಲಾ ಚರ್ಚುಗಳಲ್ಲಿ ಏಕಕಾಲದಲ್ಲಿ ಈ ಉದ್ಘಾಟನಾ ಸಮಾರಂಭವನ್ನು ನಡೆಸಿ ಜುಬಿಲಿ ಲಾಂಛನವನ್ನು ಅನಾವರಣಗೊಳಿಸಲಾಯಿತು, ಸಮರ್ಪಿತ ಪ್ರಾರ್ಥನೆಗಳನ್ನು ಪಠಿಸಿ, ಪ್ರತೀ ಚರ್ಚುಗಳಲ್ಲಿ ಯಾಜಕರು ಲಾಂಛನದ ಮಹತ್ವವನ್ನು ಮತ್ತು ಅದರ ಸAಕೇತವನ್ನು ಸಭೆಗೆ ವಿವರಿಸಿದರು.

ಉಡುಪಿ ಧರ್ಮಪ್ರಾಂತ್ಯದ ವಿಕಾರ್‌ ಜನರಲ್‌ ಮೊನ್ಸಿಂಜ್ಞೋರ್‌ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ವಂ|ಡಾ| ರೋಶನ್ ಡಿಸೋಜಾ, ಕಲ್ಯಾಣಪುರ, ಶಿರ್ವ, ಕಾರ್ಕಳ, ಉಡುಪಿ ವಲಯಗಳ ಪ್ರಧಾನ ಧರ್ಮಗುರುಗಳಾದ ವಂ| ವಲೇರಿಯನ್ ಮೆಂಡೊನ್ಸಾ, ವಂ|ಡಾ| ಲೆಸ್ಲಿ ಡಿಸೋಜಾ, ವಂ| ಪಾವ್ಲ್ ರೇಗೊ, ವಂ| ಚಾರ್ಲ್ಸ್ ಮಿನೇಜಸ್, ಮೌಂಟ್ ರೋಸರಿ ಚರ್ಚಿನ ಧರ್ಮಗುರು ವಂ| ರೋಕ್ ಡೆಸಾ, ಧರ್ಮಪ್ರಾಂತ್ಯದ ಪಾಲನಾ ಸಮಿತಿಯ ಕಾರ್ಯದರ್ಶಿ ಲೆಸ್ಲಿ ಅರೋಝಾ ಉಪಸ್ಥಿತರಿದ್ದರು.

Latest Indian news

Popular Stories