ಉಡುಪಿ | ಎಬಿವಿಪಿಯಿಂದ ಡಿಸಿ ಕಚೇರಿ ಮುತ್ತಿಗೆಗೆ ಯತ್ನ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ರಾಜ್ಯ ಸರಕಾರವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ವಿದ್ಯಾರ್ಥಿಗಳ ತರಗತಿಗಳು ಸುಗಮವಾಗಿ ನಡೆಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಕರೆ ನೀಡಿತ್ತು. ಅದರ ಅನ್ವಯ ಶುಕ್ರವಾರ ಡಿಸಿ ಕಚೇರಿ ಮುಂಭಾಗ ಎಬಿವಿಪಿ ಉಡುಪಿ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿಯವರು ಸರಿಯಾದ ಸಮಯಕ್ಕೆ ಬಾರದೆ ಹೋದಾಗ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಮಾತಿನ ಚಕಾಮಕಿ ನಡೆಯಿತು ಮತ್ತು ವಿದ್ಯಾರ್ಥಿ ಪರಿಷತ್ ಡಿಸಿ ಕಚೇರಿ ಮುತ್ತಿಗೆಗೆ ಪ್ರಯತ್ನವನ್ನು ಮಾಡಿದ ನಂತರ ಅಪರ ಜಿಲ್ಲಾಧಿಕಾರಿಯವರು ಖುದ್ದು ಹೊರಗೆ ಬಂದು ಮನವಿಯನ್ನು ಸ್ವೀಕರಿಸಿ ಬೇಡಿಕೆಯನ್ನು ಆಲಿಸಿದರು.

ನಗರ ಕಾರ್ಯದರ್ಶಿ ಶ್ರೀವತ್ಸ ಇವರು ಮಾತನಾಡಿ ಅತಿಥಿ ಉಪನ್ಯಾಸಕರ ಸಮಸ್ಯೆಯಿಂದಾಗಿ ನಮ್ಮ ಮಂಗಳೂರು ಯುನಿವರ್ಸಿಟಿಯ ಕೆಲವು ಕಾಲೇಜುಗಳಲ್ಲಿ ನಾಲ್ಕು ತಿಂಗಳಲ್ಲಿ ನಡೆಯಬೇಕಾದ ಪಠ್ಯವನ್ನು ಎರಡು ತಿಂಗಳಲ್ಲಿ ಮುಗಿಸುತ್ತಿದ್ದಾರೆ ಇದರಿಂದಾಗಿ ವಿದ್ಯಾರ್ಥಿಗಳಿಗೆ ಬಹಳ ಸಮಸ್ಯೆಗಳಾಗುತ್ತಿದೆ ಇದಕ್ಕೆ ಆದಷ್ಟು ಬೇಗ ಶಿಕ್ಷಕರ ಬೇಡಿಕೆಯನ್ನು ಈಡೇರಿಸಿ ಶೀಘ್ರ ಪರಿಹಾರವನ್ನು ಕೊಡುವುದರೊಂದಿಗೆ ಖಾಲಿ ಇರುವ ಸ್ಥಾನಗಳನ್ನು ಬಡ್ತಿ ಮಾಡಿ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಸಹ ವಾಡಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ತಾಲೂಕು ಸಂಚಾಲಕರಾದ ಅಜಿತ್ ಜೋಗಿ, ನಗರ ಸಹಕಾರ್ಯದರ್ಶಿ ಕಾರ್ತಿಕ್, ನಗರ ವಿದ್ಯಾರ್ಥಿನಿ ಪ್ರಮುಖ್ ಸಂಹಿತಾ ಸಹ ಪ್ರಮುಖ್ ಕೃತಿ ಮತ್ತು ಪ್ರಮುಖರಾದ ಸ್ವಸ್ತಿಕ್, ನವೀನ್, ಮಂಗಳಗೌರಿ, ಪ್ರಶ್ಮ, ಶ್ರೀಹರಿ, ಅನಂತಕೃಷ್ಣ, ಆದಿತ್ಯ, ಸುಮುಖ, ಮಾಣಿಕ್ಯ, ರವಿಚಂದ್ರ ಉಪಸ್ಥಿತರಿದ್ದರು.

IMG 20231215 WA0062 Udupi

IMG 20231215 WA0063 Udupi

IMG 20231215 WA0063 1 Udupi

IMG 20231215 WA0066 Udupi

IMG 20231215 WA0064 Udupi

IMG 20231215 WA0067 Udupi

Latest Indian news

Popular Stories