ಉಡುಪಿ: 4(4)(b)(ರೈತರಿಗೆ ನಿಗಧಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರ್ಕಾರದಿಂದ ಅನುಮತಿಯನ್ನು ನೀಡಲಾಗಿದ್ದು, ಜಿಲ್ಲೆಯ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ https://landrecords.karnataka.gov.in/service4 ವೆಬ್‌ಸೈಟ್ ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ ಅಥವಾ ಪಹಣಿಹಾಗೂಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದ್ದು, ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.