ಉಡುಪಿ: ಎಬಿವಿಪಿಯಿಂದ ಅನುಮತಿಯಿಲ್ಲದೆ ಸಾರ್ವಜನಿಕರಿಗೆ ಸಮಸ್ಯೆಯಾಗುವ ರೀತಿಯಲ್ಲಿ ಮೆರವಣಿಗೆ ಆರೋಪ – ಎಫ್.ಐ.ಆರ್ ದಾಖಲು

ಉಡುಪಿ: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ವಿರೋಧಿಸಿ ಅನುಮತಿಯಿಲ್ಲದೆ ಮೆರವಣಿಗೆ ನಡೆಸಿದ ಆರೋಪದಲ್ಲಿ ಎಬಿವಿಪಿ ಮೇಲೆ ಪ್ರಕರಣ ದಾಖಲಾಗಿದೆ.

ಸುಮಾರು 300 ಜನರು ಅಕ್ರಮಕೂಟ ಸೇರಿ ಅನುಮತಿ ನಿರಾಕರಿಸಿದ್ದರೂ ಜೋಡುಕಟ್ಟೆಯಿಂದ ಸರ್ವಿಸ್ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ್ದಾರೆಂದು ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಕೊಟ್ಟ ದೂರಿನಂತೆ ಪ್ರಕರಣ ದಾಖಲಾಗಿದೆ.

ಅಕ್ರಮವಾಗಿ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಕ್ಲಾಕ್ ಟವರ್ ಬಳಿ ರಸ್ತೆ ತಡೆದು ಸಾರ್ವಜನಿಕರಿಗೆ, ವಾಹನ ಸವಾರರಿಗೆ ತೊಂದರೆ ನೀಡಿದ ಕಾರಣವನ್ನೂ ಉಲ್ಲೇಖಿಸಿದ್ದು ಪ್ರತಿಭಟನೆಯ ನೇತೃತ್ವ ವಹಿಸಿದ ಶ್ರೀವತ್ಸ್, ಗಣೇಶ್, ಅಜಿತ್ ಹರ್ಷಿತ್ ಮತ್ತು ಮುರಳಿ ಸೇರಿ ಇತರರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories