ಉಡುಪಿ: ಎಂಟು ವರ್ಷದ ಬಾಲಕಿ ಹೊಟ್ಟೆನೋವಿನಿಂದ ನಿಧನ

ಉಡುಪಿ: ಇಲ್ಲಿನ 76 ಬಡಗಬೆಟ್ಟಿನ ಯಲ್ಲಪ್ಪ ಅವರ ಪುತ್ರಿ ಅಶ್ವಿ‌ನಿ (8) ಹೊಟ್ಟೆ ನೋವಿನಿಂದ ಬಳಲಿ ಸಾವನ್ನಪ್ಪಿದ್ದಾಳೆ.

ಆಕೆ ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಸೂಕ್ತ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದರು. ಅ. 9ರಂದು ಬೆಳಗ್ಗೆ ಮತ್ತೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯಾಧಿಕಾರಿಗಳು ತುರ್ತು ನಿಗಾ ಘಟಕದಲ್ಲಿ ದಾಖಲಿಸಿದ್ದರು. ಸ್ಪಲ್ಪ ಸಮಯದ ಬಳಿಕ ವೈದ್ಯಾಧಿಕಾರಿಗಳು ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories