ಉಡುಪಿ: ಇಸ್ಲಾಮಿಕ್ ವೆಲ್ಫೇರ್ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ನಿ. ಉಡುಪಿ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 19 ರಂದು ಉಡುಪಿ ಜಾಮಿಯಾ ಮಸೀದಿಯ ನೆಲ ಅಂತಸ್ತಿನಲ್ಲಿ ನಡೆಯಿತು.
ಸೊಸೈಟಿಯ ಅಧ್ಯಕ್ಷರಾದ ರಿಯಾಝ್ ಅಹ್ಮದ್ ಕುಕ್ಕಿಕಟ್ಟೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಜಮಾಅತೆ ಇಸ್ಲಾಮಿ ಹಿಂದ್ ವಲಯ ಸಂಚಾಲಕರಾದ ಸಯೀದ್ ಇಸ್ಮಾಯಿಲ್ ಮುಖ್ಯ ಅತಿಥಿಗಳಾಗಿದ್ದರು. ಸೊಸೈಟಿಯ ಮುಖ್ಯ ಸಲಹೆಗಾರರಾದ ನರಸಿಂಹ ಸ್ವಾಮಿ ಸಂದರ್ಭೋಚಿತವಾಗಿ ಮಾತನಾಡಿದರು.
ಮೌಲಾನಾ ದಾನಿಶ್ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ನಿರ್ದೇಶಕರಾದ ಜಿ. ಶುಐಬ್ ಅಹ್ಮದ್ ಮಲ್ಪೆ ಸ್ವಾಗತಿಸಿದರು. ರಯೀಸ್ ಅಹ್ಮದ್ ಮಹಾಸಭೆಯ ಆಮಂತ್ರಣ ಪತ್ರಿಕೆಯನ್ನು ಓದಿ ದಾಖಲಿಸಿದರು. ಉಪಾಧ್ಯಕ್ಷರಾದ ನಿಸಾರ್ ಅಹಮದ್ ವಾರ್ಷಿಕ ವರದಿಯನ್ನು ಓದಿದರು. ಕಾರ್ಯದರ್ಶಿ ಆರಿಫ್ ಕಾಶಿಂ ಪರಿಶೋಧಿತ ಲೆಕ್ಕಪತ್ರಗಳನ್ನು ಮಂಡಿಸಿದರು. ನಿರ್ದೇಶಕರಾದ ಜಿ.ಎಂ. ಶರೀಫ್ ಹೂಡೆ ಕಾರ್ಯಕ್ರಮ ನಿರೂಪಿಸಿ, ಕೊನೆಯಲ್ಲಿ ಧನ್ಯವಾದವಿತ್ತರು.