ಉಡುಪಿ | ಪಕ್ಷ ವಿರೋಧಿ ಚಟುವಟಿಕೆ : 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪಕ್ಷೇತರ ಅಭ್ಯರ್ಥಿಯ ಜೊತೆ ಗುರುತಿಸಿಕೊಂಡು ಅವರಿಗೆ ಮತ ಯಾಚಿಸುತ್ತಿರುವ ವಿಚಾರ ಪಕ್ಷದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರೋಷನ್ ಶೆಟ್ಟಿ ಮತ್ತು ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುನೈದ್ ಇವರಿಗೆ ಜಿಲ್ಲಾ ಬಿಜೆಪಿಯಿಂದ ಶಿಸ್ತು ಕ್ರಮದ ನೋಟೀಸ್ ನೀಡಲಾಗಿದೆ.

ಪಕ್ಷದ ಪದಾಧಿಕಾರಿಗಳಾಗಿ ಜವಾಬ್ದಾರಿ ಹೊಂದಿದ್ದರೂ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದು ಅಕ್ಷಮ್ಯವಾಗಿದೆ. ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುವ ಕಾರಣಕ್ಕೆ 48 ಘಂಟೆಗಳ ಒಳಗಾಗಿ ಜಿಲ್ಲಾಧ್ಯಕ್ಷರ ಮುಂದೆ ಸ್ಪಷ್ಟೀಕರಣವನ್ನು ನೀಡಬೇಕು ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

Latest Indian news

Popular Stories