Udupi

ಉಡುಪಿ | ಬಸ್ಸುಗಳನ್ನು ನಿಲ್ದಾಣಗಳಲ್ಲಿಯೇ ನಿಲುಗಡೆ ಮಾಡಲು ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಮುಖ್ಯವಾಗಿ ಎಂ.ಜಿ.ಎಂ ಕಾಲೇಜು ಮತ್ತು ಸಂತೆಕಟ್ಟೆ ಬಸ್ಸು ನಿಲ್ದಾಣಗಳಲ್ಲಿ ಬಸ್ಸುಗಳನ್ನು ನಿಲುಗಡೆ ಮಾಡದೇ ಬಸ್ಸು ನಿಲ್ದಾಣದ ಹಿಂದೆ ಅಥವಾ ಮುಂದೆ ನಿಲುಗಡೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿರುತ್ತವೆ.

ಆದ್ದರಿಂದ ಜಿಲ್ಲೆಯಲ್ಲಿ ಸಂಚರಿಸುವ ಎಲ್ಲಾ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಕಡ್ಡಾಯವಾಗಿ ಬಸ್ಸು ನಿಲ್ದಾಣಗಳಲ್ಲಿಯೇ ಬಸ್ಸುಗಳನ್ನು ನಿಲುಗಡೆ ಮಾಡಲು ಎಲ್ಲಾ ಬಸ್ಸುಗಳ ಮಾಲೀಕರು ಕ್ರಮವಹಿಸಬೇಕು. ತಪ್ಪಿದ್ದಲ್ಲಿ ಸೂಕ್ತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದೆ

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button