ಉಡುಪಿ: ಪ್ರತಿಭಟನೆ ಹಿಂಪಡೆದ ನಾಗರಿಕ ಸಮಿತಿ; ರಸ್ತೆ ದುರಸ್ತಿ ಕಾಮಗಾರಿ ಪ್ರಾರಂಭ

ಬ್ರಹ್ಮಗಿರಿಯಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆವರೆಗಿನ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆಯನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರು ಬುಧವಾರ ಆಯೋಜಿಸಿದ್ದ ಪ್ರತಿಭಟನೆಯು, ನಗರಸಭೆಯಿಂದ ಭರವಸೆ ವ್ಯಕ್ತಪಡಿಸಿದ್ದರಿಂದ ರದ್ದಾಯಿತು.

ನಗರಸಭೆಯ ಪೌರಾಯುಕ್ತ ರಾಯಪ್ಪ ಅವರು ತಕ್ಷಣದಲ್ಲಿ ತಾತ್ಕಲಿಕ ತೇಪೆಹಾಕುವ ಕಾಮಗಾರಿಗೆ ವ್ಯವಸ್ಥೆಗೊಳಿಸಿದರು. ಮಳೆಗಾಲ ಮುಗಿದ ಬಳಿಕ ಮರು ಡಾಂಬರೀಕರಣಗೊಳಿಸುವ ಭರವಸೆ ನೀಡಿದರಿಂದ, ಒಳಕಾಡುವರು ಪ್ರತಿಭಟನೆಯನ್ನು ರದ್ದುಗೊಳಿಸಿದರು. ಪೌರಾಯುಕ್ತರ ತಕ್ಷಣದ ಸ್ಪಂದನೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಯಿತು.

ಬೇಸಿಗೆಯಲ್ಲಿ ಈ ರಸ್ತೆಯು ಡಾಂಬರೀಕರಣ ಮಾಡಲಾಗಿತ್ತು. ಕಳಪೆಮಟ್ಟದ ಕಾಮಗಾರಿಯಿಂದಾಗಿ ರಸ್ತೆಗಳಲ್ಲಿ ಹೊಂಡಗಳು ಬಿದ್ದುವು. ವಾಹನಗಳು ಸಂಚರಿಸಲಾಗದ ಪರಿಸ್ಥಿತಿ ಎದುರಾಯಿತು. ರಸ್ತೆಯು ಅಪಘಾತ ವಲಯವಾಗಿ ಮಾರ್ಪಟ್ಟಿತ್ತು. ಮಾಧ್ಯಮಗಳು ರಸ್ತೆ ದುಸ್ಥಿತಿಯ ಬಗ್ಗೆ ಬೆಳಕು ಚೆಲ್ಲಿದ್ದವು.

Latest Indian news

Popular Stories