ಉಡುಪಿ, ಜ.16: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಗರ್ಭಿಣಿ ಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು 20ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಇಂದು ಆದೇಶ ನೀಡಿದೆ.
ಬ್ರಹ್ಮಾವರ ತಾಲೂಕಿನ ರಿಕ್ಷಾ ಚಾಲಕ ಕೇಶವ ನಾಯ್ಕಾ(27) ಶಿಕ್ಷೆಗೆ ಗುರಿ ಯಾಗಿರುವ ಆರೋಪಿ. 13 ವರ್ಷದ ನೊಂದ ಬಾಲಕಿಯು ಶಾಲೆಗೆ ಆರೋಪಿ ರಿಕ್ಷಾದಲ್ಲಿ ಹೋಗಿ ಬರುತ್ತಿದ್ದು, ಇದರಿಂದ ಆತ ನೊಂದ ಬಾಲಕಿಯ ಮನೆಯವರೆಗೂ ಪರಿಚಯಸ್ಥನಾಗಿದ್ದನು. ನೊಂದ ಬಾಲಕಿಯನ್ನು ಪ್ರೀತಿಸುವುದಾಗಿ ತಿಳಿಸಿದ ಆತ, 2023ರ ಫೆ.17 ರಂದು ಆಕೆಯನ್ನು ಪುಸಲಾಯಿಸಿ ತನ್ನ ರಿಕ್ಷಾದಲ್ಲಿ ಲಾಡ್ಜ್ಗೆ ಕರೆದುಕೊಂಡು ಹೋಗಿ ಬಲತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ ಅತ್ಯಾಚಾರ ಎಸಗಿದ್ದನು. ಈ ವಿಚಾರವನ್ನು ಯಾರಲ್ಲೂ ಹೇಳಬಾರದೆಂದು ಹೆದರಿಸಿದ್ದನು. ಅದರಂತೆ ಆಕೆ ಗರ್ಭವತಿಯಾಗಿದ್ದು, ಈ ಬಗ್ಗೆ ನೊಂದ ಬಾಲಕಿಯ ತಂದೆ ತಾಯಿ ವಿಚಾರಿಸಿ ದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಿನ ಪೊಲೀಸ್ ನಿರೀಕ್ಷಕ ಜಯಾನಂದ ಕೆ. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
28 ಸಾಕ್ಷಿಗಳ ಪೈಕಿ ಅಭಿಯೋಜನೆ ಪರವಾಗಿ 16 ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾ ಲಯ, ಮುಖ್ಯವಾಗಿ ನೊಂದ ಬಾಲಕಿಯ ಸಾಕ್ಷ ಮತ್ತು ಸಾಂದರ್ಭಿಕ ಸಾಕ್ಷಗಳನ್ನು ಪರಿಗಣಿಸಿತು.ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿ ದೋಷಿ ಎಂದು ಪರಿಗಣಿಸಿ ಅತ್ಯಾಚಾರ ಎಸಗಿರುವುದಕ್ಕೆ 20ವರ್ಷಗಳ ಕಠಿಣ ಜೈಲುಶಿಕ್ಷೆ ಮತ್ತು 20ಸಾವಿರ ರೂ. ದಂಡ, ಬಾಲಕಿಯನ್ನು ಆಕೆಯ ಹೆತ್ತವರಿಗೆ ಗೊತ್ತಿಲ್ಲದೇ ಪುಸಲಾಯಿಸಿ ಕರೆದುಕೊಂಡು ಹೋಗಿರುವುದಕ್ಕೆ 3ವರ್ಷ ಕಾರಾಗೃಹ ಶಿಕ್ಷೆ ಮತ್ತು 5ಸಾವಿರ ರೂ. ದಂಡ ಹಾಗೂ ಬಾಲಕಿಗೆ ಬೆದರಿಕೆ ಹಾಕಿರುವುದಕ್ಕೆ ಒಂದು ವರ್ಷ ಶಿಕ್ಷೆ ಮತ್ತು 1ಸಾವಿರ ರೂ. ದಂಡ ವಿಧಿಸಿದರು. ದಂಡ ಕಟ್ಟಲು ತಪ್ಪಿದಲ್ಲಿ ಹೆಚ್ಚುವರಿ ಆರು ತಿಂಗಳ ಶಿಕ್ಷೆ ಮತ್ತು ನೊಂದ ಬಾಲಕಿಗೆ ಪರಿಹಾರವಾಗಿ ಸರಕಾರದಿಂದ 3ಲಕ್ಷ ರೂ. ನೀಡಬೇಕೆಂದು ನ್ಯಾಯಾಲಯ ಆದೇಶಿಸಿತು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದಾ