ಉಡುಪಿ ಜಿಲ್ಲೆಯಲ್ಲಿ ಮಳೆ ಕಡಿಮೆ ಇರುವ ಕಾರಣ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಳೆ ಪ್ರಮಾಣ ಹೆಚ್ಚಾದರೆ ಮುಂದಿನ ಪರಿಸ್ಥಿತಿ ಅವಲೋಕಿಸಿ ರಜೆ ಘೋಷಿಸುವ ಸಾಧ್ಯತೆ ಇದೆ. ಆದರೆ ಸದ್ಯಕ್ಕೆ ಉಡುಪಿ ಜಿಲ್ಲೆಗೆ ರಜೆಯಿರುವುದಿಲ್ಲ ಎಂದು ತಿಳಿದು ಬಂದಿದೆ.
ಭಾರೀ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಗೆ ನಾಳೆ ರಜೆ ಘೋಷಿಸಲಾಗಿದೆ.