ಉಡುಪಿ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ನೇಮಕ

ಉಡುಪಿ: ಉಡುಪಿ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಮುಂಚೆ ಜಿಲ್ಲಾಧಿಕಾರಿಯಾಗಿದ್ದ ಕುರ್ಮಾ ರಾವ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ರಾಜ್ಯ ಸರಕಾರದ ಆದೇಶದ ಮೇರೆಗೆ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಸೆಪ್ಟೆಂಬರ್ 2021 ರಲ್ಲಿ ಉಡುಪಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂದ್ದರು ಇಂದು ವರ್ಗಾವಣೆ ಗೊಂಡಿದ್ದಾರೆ.

Latest Indian news

Popular Stories