ಉಡುಪಿ: ಡೆಂಗ್ಯೂ ಜ್ವರ ನಿಯಂತ್ರಣ; ಜಾಗೃತಿ

ಉಡುಪಿ ನಗರದ ಕೊಡಂಕೂರು ವಾರ್ಡಿನ ಪ್ರಮೋದ್ ಬಡಾವಣೆಯಲ್ಲಿ ಸಾರ್ವಜನಿಕರಿಗೆ ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜಾಗೃತಿ ಹಾಗೂ ಪ್ರತಿ ಶುಕ್ರವಾರ ಒಣ ದಿನ ಆಚರಣೆ ಯ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ಚಾಲನೆ ನೀಡಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ ಪಿ ಗಡದ್, ಪೌರಾಯುಕ್ತ ರಾಯಪ್ಪ, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ. ಪ್ರಶಾಂತ್ ಭಟ್, ತಾಲೂಕು ವೈದ್ಯಾಧಿಕಾರಿ ಡಾ. ವಾಸುದೇವ ಭಟ್, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಿದ್ದರು

Latest Indian news

Popular Stories