ಉಡುಪಿ, ಫೆ.9: ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪದ ಅಂಜುಮಾನ್ ಮಸೀದಿಯಲ್ಲಿ ಶುಕ್ರವಾರದ ಜುಮಾ ನಮಾಝ್ ವೇಳೆ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಕುಸಿದು ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ದೊಡ್ಡಣಗುಡ್ಡೆ ಕರಂಬಳ್ಳಿ ನಿವಾಸಿ ಮುಸ್ತಾಕ್(55) ಎಂದು ಗುರುತಿಸಲಾಗಿದೆ. ಇವರು ಮಧ್ಯಾಹ್ನ ಜುಮಾ ನಮಾಝ್‌ಗಾಗಿ ಮಸೀದಿಗೆ ಬಂದಿದ್ದು, ಅಲ್ಲಿ ಸುನ್ನತ್ ನಮಾಝ್ ಮಾಡಿ, ಬಳಿಕ ಖುತ್ಭಾ ಕೇಳಲು ಕುಳಿತಿದ್ದಾಗ ಹೃದಯಾಘಾತದಿಂದ ಅಲ್ಲೇ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ