ಉಡುಪಿ: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ | ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಉಡುಪಿ: ಪೆಟ್ರೋಲ್ ಬಂಕ್ ನಲ್ಲಿದ್ದ ಜನರೇಟರ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಕಾರ್ಮಿಕರು ಸಮಯಪ್ರಜ್ಞೆ ಮೆರೆದ ಪರಿಣಾಮ ಸಂಭವನೀಯ ಅವಘಡವೊಂದು ತಪ್ಪಿದ ಘಟನೆ ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ನಡೆದಿದೆ.

ಉಡುಪಿಯ ಸಿಟಿಬಸ್ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿಯ ಮುಖ್ಯ ರಸ್ತೆಯಲ್ಲಿರುವ ಪೆಟ್ರೋಲ್‌ ಪಂಪ್ ನ ಜನರೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಪಂಪ್‌ನ ಸಿಬಂದಿಗಳು ಎಚ್ಚೆತ್ತು ಜನರೇಟ‌ರ್ ಅನ್ನು ರಾಷ್ಟ್ರೀಯ ಹೆದ್ದಾರಿಯ ಮುಖ್ಯ ರಸ್ತೆಗೆ ತಂದು ಬೆಂಕಿ ನಂದಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಪೆಟ್ರೋಲ್ ಪಂಪ್ ಸಿಬಂದಿಯ ಸಮಯ ಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.

Latest Indian news

Popular Stories