Featured StoryUdupi

ಉಡುಪಿ: ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಮಿಸ್‌ ಫೈರಿಂಗ್‌: ಓರ್ವ ಸಿಬ್ಬಂದಿಗೆ ಗಾಯ

ಉಡುಪಿ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಇಂದು ಮಧ್ಯಾಹ್ನ ಮಿಸ್‌ ಫೈರಿಂಗ್‌ ಆದ ಪರಿಣಾಮ ಸಿಬ್ಬಂದಿಯೋರ್ವರು ಗಾಯಗೊಂಡಿದ್ದಾರೆ.

ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್‌ ಪತ್ತೆಯಾಗಿತ್ತು. ಅದನ್ನು ಎತ್ತಿಕೊಂಡ ಸಿಬ್ಬಂದಿ ಆಪರೇಟ್‌ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿದ್ದು, ಅವರನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್‌ ವಶಕ್ಕೆ ಪಡೆದುಕೊಂಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button