Udupi

ಉಡುಪಿ | ಪ್ರಮುಖ ಪ್ರಕಟಣೆಗಳು

ಕೆಲಸಕ್ಕೆಂದು ತೆರಳಿದ ವ್ಯಕ್ತಿ ನಾಪತ್ತೆ

ಉಡುಪಿ ಜನವರಿ 28 (ಕ.ವಾ):ಬೈಂದೂರು ತಾಲೂಕು ಯೆಳಜಿತ್ ಗ್ರಾಮದ ಅರೆಹೊಳೆ ಎಣ್ಣೆಮಕ್ಕಿ ನಿವಾಸಿ ಸೀತಾರಾಮ ಪೂಜಾರಿ (40) ಎಂಬ ವ್ಯಕ್ತಿಯು 2024 ರ ಫೆಬ್ರವರಿ 18 ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಮನೆಯಿಂದ ಕೆಲಸಕ್ಕೆಂದು ಹೋದವರು ವಾಪಾಸು ಬಾರದೇ ಸಂಬAಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.
5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ ದೂ.ಸಂಖ್ಯೆ: 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

ವ್ಯಕ್ತಿಗಳ ಸ್ಥಿತಿ ಚಿಂತಾಜನಕ : ವಾರಸುದಾರರಿಗೆ ಸೂಚನೆ
ಉಡುಪಿ ಜನವರಿ 28 (ಕ.ವಾ): ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ವಿಠ್ಠಲ್ (47) ಹಾಗೂ 30 ವರ್ಷದ ಅಪರಿಚಿತ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಮೃತ ಅಪರಿಚಿತ ಮಹಿಳೆಯ ವಾರಸುದಾರರಿಗೆ ಸೂಚನೆ
ಉಡುಪಿ ಜನವರಿ 28 (ಕ.ವಾ): ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ 50 ವರ್ಷದ ಅಪರಿಚಿತ ಮಹಿಳೆಯು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Back to top button