ಉಡುಪಿ: ಅನರ್ಹರು ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚನೆ


ಉಡುಪಿ: ಜಿಲ್ಲೆಯಲ್ಲಿ ವೇತನವನ್ನು ಗಣನೆಗೆ ತೆಗೆದುಕೊಳ್ಳದ ಎಲ್ಲಾ ಖಾಯಂ ನೌಕರರು ಅಂದರೆ ಸರಕಾರ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ ನಿಗಮಗಳು/ ಸ್ವಾಯತ್ತತೆ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ ಸೇವಾತೆರಿಗೆ/ ವ್ಯಾಟ್/ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು, ಗ್ರಾಮೀಣ ಭಾಗದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು ಹಾಗೂ 1.20 ಲಕ್ಷ ರೂ. ಗಳಿಗಿಂತಲೂ ಹೆಚ್ಚು ವಾರ್ಷಿಕ ಆದಾಯ ಇರುವ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಪಡೆಯಲು (ಬಿ.ಪಿ.ಎಲ್) ಅರ್ಹರಿರುವುದಿಲ್ಲ.

ಸರ್ಕಾರ ನಿಗಧಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿ ಹೊಂದಿರುವ ಸಾರ್ವಜನಿಕರು ತಕ್ಷಣವೇ ತಾಲೂಕಿನ ತಹಶೀಲ್ದಾರರ ಕಛೇರಿಗೆ ಪಡಿತರ ಚೀಟಿಯನ್ನು ಒಪ್ಪಿಸಿ ಆದ್ಯತೇತರ (ಎ.ಪಿ.ಎಲ್) ಪಡಿತರ ಚೀಟಿ ಪಡೆಯಬೇಕು.

ಜಿಲ್ಲಾ ಮಟ್ಟದಲ್ಲಿ ಅನರ್ಹ ಪಡಿರ ಚೀಟಿದಾರರನ್ನು ಪತ್ತೆ ಹಚ್ಚಲು ತಪಾಸಣಾ ತಂಡವನ್ನು ರಚಿಸಲಾಗುತ್ತಿದ್ದು, ತಪಾಸಣಾ ಸಮಯದಲ್ಲಿ ಅನರ್ಹರು ಎಂದು ಕಂಡು ಬಂದಲ್ಲಿ ಅವರು ಪಡೆದಿರುವ ಆಹಾರದ(Prevention of Unauthorised Possesion of Rations Card) ಮುಕ್ತ ಮಾರುಕಟ್ಟೆ ದರದಲ್ಲಿ ದಂಡ ವಸೂಲಾತಿ ಮಾಡುವುದರೊಂದಿಗೆ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಕರ್ನಾಟಕ ಅನಧಿಕೃತ ಪಡಿತರ ಚೀಟಿ ) ಆದೇಶ 1977ರಡಿ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Latest Indian news

Popular Stories