Featured StoryUdupi

ಉಡುಪಿ | ಅಂತರರಾಜ್ಯ ಕಳವು ಆರೋಪಿ ಬಂಧನ

ಉಡುಪಿ: ಶಾಲಾ ಕಾಲೇಜುಗಳಲ್ಲಿ ನಡೆಯುತ್ತಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಂತರರಾಜ್ಯ ಕಳವು ಆರೋಪಿಯನ್ನು ಕಾರ್ಕಳ ಪೊಲೀಸರು ಮಾ.20ರಂದು ನಿಟ್ಟೆ ಗ್ರಾಮದ ಸಂತ ಲಾರೆನ್ಸ್ ಫ್ರೌಡ ಶಾಲೆಯ ಸಮೀಪ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೈಂದೂರು ಯೋಜನಾ ನಗರಗದ ಅರ್ಷಿತ್ ಅವಿನಾಶ್ ದೋಡ್ರೆ(24) ಎಂದು ಗುರುತಿಸಲಾಗಿದೆ.. ಈತನಿಂದ ಕೃತ್ಯಕ್ಕೆ ಬಳಸಿದ್ದ ಸುಮಾರು 2,00,000ರೂ. ಮೌಲ್ಯದ ಕಾರು, 20,000ರೂ. ಮೌಲ್ಯದ ಮೊಬೈಲ್ ಫೋನ್, 84,500ರೂ. ನಗದು ಮತ್ತು ಇತರೆ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಫೆ.21ರಂದು ವೇಳೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ, ಮಾ.4ರಂದು ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಸಂತ ಮರಿಯಾ ಗೊರಟ್ಟಿ ಆಂಗ್ಲ ಮಾದ್ಯಮ ಶಾಲೆಯ ಲ್ಲಿ ನಡೆದ ಕಳ್ಳತನ ಪ್ರಕರಣಗಳಲ್ಲಿ ಆರೋಪಿ ಪತ್ತೆಗಾಗಿ ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್. ನೇತೃತ್ವದ ಕಾರ್ಕಳ ನಗರ ಎಸ್ಸೈ ಶಿವಕುಮಾರ್, ಸಿಬ್ಬಂದಿ ರಂಜಿತ್, ಶಿವಾನಂದ, ಕಾರ್ಕಳ ಗ್ರಾಮಾಂತರ ಠಾಣೆಯ ಚಂದ್ರಶೇಖರ, ಅಜೆಕಾರು ಠಾಣೆಯ ಸತೀಶ, ಪ್ರದೀಪ್ ಅವರನ್ನು ಒಳಗೊಂಡ ತಂಡವನ್ನು ರಚಿಸಲಾಗಿತ್ತು.

ತನಿಖೆ ನಡೆಸಿದ ತಂಡ ನಿಟ್ಟೆ ಸಂತ ಲಾರೆನ್ಸ್ ಫ್ರೌಡ ಶಾಲೆಯ ಸಮೀಪ ಅನುಮಾನಾಸ್ಪದವಾಗಿ ಬಿಳಿ ಬಣ್ಣದ ಕಾರಿನಲ್ಲಿದ್ದ ಆರೋಪಿಯನ್ನು ವಶಕ್ಕೆ ಪಡೆದು ಕೊಂಡು ವಿಚಾರಣೆ ನಡೆಸಿತು. ಈ ವೇಳೆ ಆತ ಈ ಪ್ರಕರಣದಲ್ಲಿ ಭಾಗಿಯಾಗಿ ರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button