ಉಡುಪಿ, ಫೆ.15: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಮಾಜಿ ಅಧ್ಯಕ್ಷರು, ಜಮೀಯತುಲ್ ಫಲಾಹ್ ದ.ಕ. ಹಾಗೂ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಹಿರಿಯ ಸಂಘಟಕ ಕಾಸಿಂ ಬಾರಕೂರು(70) ಅಲ್ಪಕಾಲದ ಅಸೌಖ್ಯದಿಂದ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಫೆ.15ರಂದು ಮಧ್ಯಾಹ್ನ ನಿಧನರಾದರು.
ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಜಿಲ್ಲಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿಯಾಗಿ ಕಾರ್ಯನಿರ್ವಹಿಸಿರುವ ಅವರು, ಜಮೀಯ್ಯ ತುಲ್ ಫಲಾಹ್ ಉಡುಪಿ ಘಟಕದ ಅಧ್ಯಕ್ಷರಾಗಿ, ಬಾರಕೂರು ಮಲಿಕ್ ದೀನಾರ್ ಜುಮಾ ಮಸೀದಿಯ ಅಧ್ಯಕ್ಷರಾಗಿದ್ದರು.
ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಅಧ್ಯಕ್ಷ ಹಾಗೂ ಕಾರ್ಯ ದರ್ಶಿಯಾಗಿಯೂ, ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಉಪಾಧ್ಯಕ್ಷ ರಾಗಿ, ಬಹುರಾಜ್ಯ ಬಡ್ಡಿ ರಹಿತ ಆರ್ಥಿಕ ವ್ಯವಹಾರ ಸಂಸ್ಥೆ ಜನಸೇವಾ ಸಹಕಾರಿ ಸಂಸ್ಥೆಯ ವ್ಯವಹಾರದ ಉಡುಪಿ ಉಸ್ತುವಾರಿಯಾಗಿ ಇವರು ಸೇವೆ ಸಲ್ಲಿಸಿದ್ದರು. ಅಲ್ಲದೆ ವಿವಿಧ ಸಾಮಾಜಿಕ ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಇವರು, ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಯಾಸೀನ್ ಮಲ್ಪೆ, ಜಮೀಯತುಲ್ ಫಲಾಹ್ ದ.ಕ. ಹಾಗೂ ಉಡುಪಿ ಜಿಲ್ಲಾಧ್ಯಕ್ಷ ಶಭೀ ಅಹ್ಮದ್ ಖಾಜಿ, ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ನೇಜಾರು ಸಂತಾಪ ವ್ಯಕ್ತಪಡಿಸಿದ್ದಾರೆ