ಉಡುಪಿ: ಸೆ. 25 ರಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಜನತಾ ದರ್ಶನ

ಸಾರ್ವಜನಿಕ ಸಮಸ್ಯೆ ಆಲಿಸಿ ಅವುಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಪರಿಹರಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ. ಆರ್. ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ನಗರದ ಮಣಿಪಾಲನ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸೆ. ೨೫ ರಂದು ಬೆಳಗ್ಗೆ10:30 ಕ್ಕೆ ನಡೆಯಲಿದೆ.

ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories