Udupi

ಉಡುಪಿ: ಹಳೆಯ ಸರಕಾರಿ ಬಸ್ಸು ನಿಲ್ದಾಣದ ಬಳಿ ಅಸ್ವಸ್ಥಗೊಂಡು ವ್ಯಕ್ತಿ ಮೃತ್ಯು

ಉಡುಪಿ,ನ.7: ನಗರದ‌ ಹಳೆ ಸರ್ಕಾರಿ ಬಸ್ಸು ನಿಲ್ದಾಣದಲ್ಲಿ ವಿಶ್ರಮಿಸುತ್ತಿದ್ದ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡು ಸಾವನಪ್ಪಿದ ಘಟನೆ ಗುರುವಾರ‌ ಮುಂಜಾನೆ ನಡೆದಿದೆ. ನಗರ ಠಾಣೆಯ ಹೆಡ್ ಕಾನ್ಸಟೇಬಲ್ ಹರೀಶ್ ಮಾಳ ತನಿಖೆ ನಡೆಸಿದರು.ತನಿಖೆಯ ವೇಳೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ದಾಖಲೆ ದೊರಕಿರುತ್ತದೆ,ಮೃತ ವ್ಯಕ್ತಿಯ‌ನ್ನು ಸತೀಶ ಸೋಮ‌ ಪೂಜಾರಿ, ಹಾವಂಜೆಯ ಬಾಣಬೆಟ್ಟುವಿನ‌ ನಿವಾಸಿ ಎಂದು ಶಂಕಿಸಲಾಗಿದೆ.

1002168029 Udupi

ಚಿತ್ರ: ಮೃತ ವ್ಯಕ್ತಿ

 ವ್ಯಕ್ತಿ ಪ್ರಜ್ಞಾಹಿನ ಸ್ಥಿತಿಯಲ್ಲಿರುವುದನ್ನು ಗಮನಿಸಿದ ಸ್ಥಳೀಯರು ಸಮಾಜಸೇವಕ ನಿತ್ಯಾನಂದ‌ ಒಳಕಾಡುವರಿಗೆ ಮಾಹಿತಿ ನೀಡಿದ್ದರು. ತಕ್ಷಣ ಅವರು‌ ಘಟನಾ ಸ್ಥಳಕ್ಕೆ ಬಂದು, ವ್ಯಕ್ತಿಯನ್ನು ಸ್ಥಳದಲ್ಲಿದ್ದವರ ಸಹಕಾರದಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಪರೀಕ್ಷಿಸಿದ ವೈದ್ಯರು ವ್ಯಕ್ತಿ ಅದಾಗಲೇ ಮೃತಪಟ್ಟಿರುವುದನ್ನು ಧೃಡಿಕರಿಸಿದರು. ಶವವನ್ನು ಜಿಲ್ಲಾಸ್ಪತ್ರೆಯ ಶವರಕ್ಷಣಾ ಘಟಕದಲ್ಲಿ ರಕ್ಷಿಸಿಡಲಾಗಿದೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button